Select Your Language

Notifications

webdunia
webdunia
webdunia
webdunia

ಬಾಲಕನಿಗೆ ಲೈಂಗಿಕ ಕಿರುಕುಳ! ಕಠಿಣ ಜೈಲು ಶಿಕ್ಷೆ

ಲೈಂಗಿಕ ಕಿರುಕುಳ
ಗುವಾಹಟಿ : ಅಸ್ಸಾಂನ ಹೈಲಕಂಡಿ ಜಿಲ್ಲೆಯ ನ್ಯಾಯಾಲಯವೊಂದು 11 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಹೈಲಕಂಡಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ವಿಶೇಷ ನ್ಯಾಯಾಧೀಶ) ಸಂಜೋಯ್ ಹಜಾರಿಕಾ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅನೈಸರ್ಗಿಕ ಅತ್ಯಾಚಾರ) ಅಡಿಯಲ್ಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20,000 ರೂ. ದಂಡವನ್ನು ವಿಧಿಸಿದ್ದಾರೆ.

2018ರ ಜೂನ್ 5ರಂದು ಲಾಲಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಅಪರಾಧಿ ಆಗ 21 ವರ್ಷ ವಯಸ್ಸಿನವನಾಗಿದ್ದನು. ಅವನು ಇಬ್ಬರು ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಒಬ್ಬ ಬಾಲಕನನ್ನು ಲಾಲಾ ರೂರಲ್ ಕಾಲೇಜು ಆವರಣದಲ್ಲಿರುವ ಶೌಚಾಲಯಕ್ಕೆ ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದನು.

ನಂತರ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಕಳೆದ ವರ್ಷ ಚಾರ್ಜ್ ಶೀಟ್ ಸಲ್ಲಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಯುದ್ಧ: ರಷ್ಯಾದಿಂದ ಹೊರನಡೆದ ಇನ್ಫೋಸಿಸ್!?