Webdunia - Bharat's app for daily news and videos

Install App

ಸಂಸತ್ತಿನ ಹೊರಗೆ ಕೈ ಕುಲುಕಿ ಕಿರುನಗೆ ಬೀರಿದ ಚಿರಾಗ್ ಪಾಸ್ವಾನ್- ಕಂಗನಾ

Sampriya
ಬುಧವಾರ, 26 ಜೂನ್ 2024 (15:40 IST)
Photo Courtesy X
ನವದೆಹಲಿ: ಈ ಹಿಂದೆ  ಬಾಲಿವುಡ್ ಚಿತ್ರವೊಂದರಲ್ಲಿ ನಾಯಕ ನಾಯಕಿಯಾಗಿ ಅಭಿನಯಿಸಿದ ಚಿರಾಗ್ ಪಾಸ್ವಾನ್ ಮತ್ತು ಕಂಗನಾ ರಣಾವತ್ ಅವರು ಸಂಸತ್ ಪ್ರವೇಶಿಸಿ ಮತ್ತೇ ಸಹೋದ್ಯೋಗಿಗಳಾಗಿದ್ದಾರೆ. ಇಂದು ಸಂಸತ್ತಿನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಇವರು ಪರಸ್ಪರ ಶುಭಕೋರಿ ಶೇಕ್ ಹಾಡ್ ಮಾಡಿದ್ದಾರೆ.

2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಚಿತ್ರ ಅಷ್ಟೆನೂ ಚಿತ್ರ ಉತ್ತಮ ಪ್ರದರ್ಶನ ಕಾಣಲಿಲ್ಲ. ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆ  ಹಿರಿಯ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ನೆರಳಿನಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು.

ಕಂಗನಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದು, ಚಿತ್ರರಂಗದಲ್ಲಿ ಸಕ್ರೀಯರಾಗಿರುವಾಗಲೇ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಇವರ ಅಭಿನಯದ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ಸೆಪ್ಟೆಂಬರ್ 6 ರಂದು ತೆರೆಗೆ ಬರಲಿದೆ.

ಪಾಸ್ವಾನ್ ಈಗ ಬಿಜೆಪಿಯ ಪ್ರಮುಖ ಮಿತ್ರ ಪಕ್ಷವಾದ ಎಲ್‌ಜೆಪಿ (ರಾಮ್ ವಿಲಾಸ್) ಅನ್ನು ಮುನ್ನಡೆಸುತ್ತಿದ್ದಾರೆ, ಈ ಚುನಾವಣೆಯಲ್ಲಿ ಅದು ಸ್ಪರ್ಧಿಸಿದ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ದಿಗ್ಭ್ರಮೆಗೊಳಿಸಿತು. ಅವರು ಈಗ ಆಹಾರ ಸಂಸ್ಕರಣಾ ಉದ್ಯಮಗಳ ಖಾತೆಯ ಉಸ್ತುವಾರಿ ಹೊಂದಿರುವ ಕ್ಯಾಬಿನೆಟ್ ಸಚಿವರಾಗಿದ್ದಾರೆ.

ರನೌತ್ ಅವರು ಮೊದಲ ಬಾರಿಗೆ ಸಂಸದರಾಗಿದ್ದಾರೆ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಆಯ್ಕೆಯಾಗಿದ್ದಾರೆ. ನಟ-ರಾಜಕಾರಣಿ ಈ ಚುನಾವಣೆಯಲ್ಲಿ ರಾಜ್ಯ ಸಚಿವ ಮತ್ತು ಹೆವಿವೇಯ್ಟ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರನ್ನು ಸುಮಾರು 75,000 ಮತಗಳ ಅಂತರದಿಂದ ಸೋಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments