Webdunia - Bharat's app for daily news and videos

Install App

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದ ಸಿಟಿ ರವಿ

Sampriya
ಗುರುವಾರ, 19 ಡಿಸೆಂಬರ್ 2024 (16:44 IST)
Photo Courtesy X
ಬೆಳಗಾವಿ: ಅಂಬೇಡ್ಕರ್ ವಿರೋಧಿ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ.

ಇಂದು ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಶೂನ್ಯ ವೇಳೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿ ಮಾಡಿದರು. ಕೂಡಲೇ ಶಾ ಅವರು ಬಂಧಿಸಿ, ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಇದೇ ವೇಳೆ, ಬಿಜೆಪಿ ಸದಸ್ಯರು ಕೂಡ ಅಂಬೇಡ್ಕರ್ ಭಾವಚಿತ್ರ ಹಿಡಿದು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.

ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ಡ್ರಗ್ ಅಡಿಕ್ಟ್‌  ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀರು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು.

ಆಗ ಸಿ.ಟಿ. ರವಿ, ಅಶ್ಲೀಲ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದು ಪ್ರಶ್ನಿಸಿದರು.  ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments