Select Your Language

Notifications

webdunia
webdunia
webdunia
webdunia

ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ನಿರ್ಧಾರ

Arvind Kejriwal

Krishnaveni K

ನವದೆಹಲಿ , ಸೋಮವಾರ, 15 ಏಪ್ರಿಲ್ 2024 (08:33 IST)
ನವದೆಹಲಿ: ಅಬಕಾರಿ ಅಕ್ರಮ ಹಗರಣದಲ್ಲಿ ಇಡಿ ಇಲಾಖೆಯಿಂದ ಬಂಧಿತರಾಗಿ ಇದೀಗ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಇಂದಿಗೆ ಕೇಜ್ರಿವಾಲ್ ನ್ಯಾಯಾಂಗ ಅವಧಿ ಮುಕ್ತಾಯವಾಗುತ್ತಿದೆ. ಈ ಮೊದಲು ಏಪ್ರಿಲ್ 1 ರಂದು ದೆಹಲಿ ಹೈಕೋರ್ಟ್ ಏಪ್ರಿಲ್ 15 ರವರೆಗೆ ಕೇಜ್ರಿವಾಲ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದರ ನಡುವೆ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಇದನ್ನು ತಿರಸ್ಕರಿಸಿತ್ತು. ಹೀಗಾಗಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂಕೋರ್ಟ್ ನಲ್ಲಿ ಇಂದು ಅವರ ಅರ್ಜಿಯ ವಿಚಾರಣೆ ನಡೆಯಲಿದೆ. ಈ ಮೊದಲು ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಬಂಧನ ನ್ಯಾಯಯುತವಾಗಿದೆ ಎಂಬ ಕಾರಣಕ್ಕೆ ಅರ್ಜಿ ತಿರಸ್ಕರಿಸಿತ್ತು. ಇದೀಗ ಸುಪ್ರೀಂಕೋರ್ಟ್ ದೆಹಲಿ ಕೋರ್ಟ್ ಆದೇಶವನ್ನೇ ಎತ್ತಿ ಹಿಡಿಯುತ್ತಾ ಅಥವಾ ಕೇಜ್ರಿವಾಲ್ ಗೆ ರಿಲೀಫ್ ನೀಡುತ್ತಾ ಕಾದು ನೋಡಬೇಕಿದೆ.

ದೆಹಲಿ ಅಬಕಾರಿ ಅಕ್ರಮ ನೀತಿಗೆ ಸಂಬಂಧಪಟ್ಟಂತೆ 100 ಕೋಟಿ ರೂ. ಡೀಲ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಸಿಎಂ ಕೇಜ್ರಿವಾಲ್ ರನ್ನು ಮಾರ್ಚ್ 21 ರಂದು ಬಂಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿಯಲ್ಲಿ ನವೋ ಅಬ್ಬರ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಪ್ರಧಾನಿ ಮೋದಿ