ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಗಲಿಕೆಗೆ ದೇಶಾದ್ಯಂತ ಸಂತಾಪ ವ್ಯಕ್ತವಾಗತೊಡಗಿದೆ.
ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ಟ್ವಿಟ್ ಮಾಡಿದ್ದಾರೆ.