ದೇವೇಂದ್ರ ಫಡ್ನವೀಸ್ ರಾಜೀನಾಮೆ; ವ್ಯಂಗ್ಯ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 27 ನವೆಂಬರ್ 2019 (09:32 IST)
ಬೆಂಗಳೂರು : ಮಹಾರಾಷ್ಟ್ರದಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಕ್ಕೆ ಅಧಿಕಾರ ದಾಹಿ ಬಿಜೆಪಿ ತನ್ನ ಕೃತ್ಯಗಳಿಗೆ ತಾನೇ ಬೆಲೆ ತೆರುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿದು ಬೇಸರವಾಯಿತು. ಹಾಗೇ ನೋಡಿದರೆ ಅವರ ಪದತ್ಯಾಗ ನನಗೆ ಖುಷಿ ಕೊಡಬೇಕಿತ್ತು. ಯಾಕೆಂದರೆ ನನ್ನ ಸರ್ಕಾರವನ್ನು ಕೆಡವಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಅವರೇ ಅಲ್ಲವೇ? ಅನರ್ಹರಿಗೆ ಆತಿಥ್ಯ ಕೊಟ್ಟವರೂ ಅವರೇ. ಈಗ ಅವರಿಗೆ ಕಾಲ ಉತ್ತರ ಕೊಟ್ಟಿದೆ ಎಂದು ಲೇವಡಿ ಮಾಡಿದ್ದಾರೆ.

 

ಅಲ್ಲದೇ ಮಾಡಿದ್ದುಣ್ಣೋ ಮಹರಾಯ ಎಂಬುದು ಲೋಕ ರೂಢಿ. ಮಾಡಿದ್ದರ ಪ್ರತಿಫಲ ದೇವೇಂದ್ರ ಫಡ್ನವೀಸ್ ಉಣ್ಣುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಯಡಿಯೂರಪ್ಪ ಕೂಡ ಉಣ್ಣುತ್ತಾರೆ. ಅಧಿಕಾರ ಹಪಹಪಿ, ಸರ್ಕಾರಗಳನ್ನು ಕೆಡವುದು , ಚುನಾವಣೆ ತರುವುದನ್ನು ಬಿಜೆಪಿ ಇನ್ನಾದರೂ ಬಿಡಲಿ ಎಂದು ಅವರು ಕಿಡಿಕಾರಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಮುಂದಿನ ಸುದ್ದಿ
Show comments