Webdunia - Bharat's app for daily news and videos

Install App

ಜೈಲಿನಿಂದಲೇ ಸಿಎಂ ಕೇಜ್ರಿವಾಲ್ ಮೊದಲ ಆದೇಶ: ಅವರಿಗೆ ನಿಮ್ಮದೇ ಚಿಂತೆ ಎಂದ ಆಪ್ ನಾಯಕಿ

Krishnaveni K
ಭಾನುವಾರ, 24 ಮಾರ್ಚ್ 2024 (14:14 IST)
ನವದೆಹಲಿ: ಅಬಕಾರಿ ಅಕ್ರಮ ಹಗರಣದಲ್ಲಿ 100 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಮೊದಲ ಆದೇಶ ಹೊರಡಿಸಿದ್ದಾರೆ.

ಅಕ್ರಮ ಆರೋಪದಲ್ಲಿ ಬಂಧಿತರಾಗಿದ್ದರೂ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಬದಲಾಗಿ ಜೈಲಿನಲ್ಲಿದ್ದುಕೊಂಡೇ ಅಧಿಕಾರ ಚಲಾಯಿಸುತ್ತಿದ್ದಾರೆ. ಈ ನಡುವೆ ಜೈಲಿನಲ್ಲಿಯೇ ದೆಹಲಿಯ ನೀರಿನ ಸಮಸ್ಯೆ ಕುರಿತು ಆಪ್ತರ ಮೂಲಕ ಹೊಸ ಆದೇಶ ಹೊರಡಿಸಿದ್ದಾರೆ. ಇದನ್ನು ಆಪ್ ನಾಯಕಿ, ದೆಹಲಿ ಜಲ ಸಚಿವೆ ಅತಿಶಿ ಮರ್ಲೆನಾ ಓದಿದ್ದಾರೆ.

ಕೇಜ್ರಿವಾಲ್ ನೀಡಿದ ಆದೇಶವನ್ನು ಮಾಧ‍್ಯಮಗಳ ಮುಂದೆ ಓದಿ ಅತಿಶಿ, ಜೈಲಿನಲ್ಲಿದ್ದರೂ ಮುಖ್ಯಮಂತ್ರಿಗಳಿಗೆ ಜನರದ್ದೇ ಚಿಂತೆ ಎಂದಿದ್ದಾರೆ. ‘ದೆಹಲಿಯ ಕೆಲವು ಪ್ರದೇಶಗಳಲ್ಲಿ ಒಳಚರಂಡಿ ಮತ್ತು ನೀರಿನ ಸಮಸ್ಯೆಗಳಿವೆ ಎಂದು ತಿಳಿದುಕೊಂಡಿದ್ದೇನೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿರುವುದರಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದ್ದಾರೆ ಎಂದು ಅತಿಶಿ ಹೇಳಿದ್ದಾರೆ.

ಕೇಜ್ರಿವಾಲ್ ತಮ್ಮ ಹೊಸ ಆದೇಶದಲ್ಲಿ ದೆಹಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಅಗತ್ಯ ಬಿದ್ದರೆ ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ ಎಂದು ಅತಿಶಿ ಆದೇಶ ಓದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments