Select Your Language

Notifications

webdunia
webdunia
webdunia
webdunia

ನ್ಯಾಯ ಕೊಡಿಸಕ್ಕಾಗದ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲಿ: ನಿರ್ಭಯಾ ತಾಯಿ ಆಗ್ರಹ

Nirbhaya Mother

Sampriya

ಕೋಲ್ಕತ್ತಾ , ಶನಿವಾರ, 17 ಆಗಸ್ಟ್ 2024 (18:20 IST)
Photo Courtesy X
ಕೋಲ್ಕತ್ತಾ: ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಪ್ರತಿಭಟನೆಯ ನಡುವೆ, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿದರು. ಈ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿರುವ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

"ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು, ಮುಖ್ಯಮಂತ್ರಿಗಳು ಪ್ರತಿಭಟನೆಗಳನ್ನು ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ನಿರ್ಭಯಾ ತಾಯಿ ಆರೋಪಿಸಿದರು.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ಜೋರಾಗಿದೆ.

ಬ್ಯಾನರ್ಜಿ ಅವರನ್ನು ಟೀಕಿಸಿದ ನಿರ್ಭಯಾ ಅವರ ತಾಯಿ, "ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಮಮತಾ ಬ್ಯಾನರ್ಜಿ ಸಾರ್ವಜನಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ಹೇಳಿದರು.

ಈ ಸಮಸ್ಯೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳೆಯಾಗಿ, ರಾಜ್ಯದ ಮುಖ್ಯಸ್ಥೆಯಾಗಿರುವ ಅವರು ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾದ ಕಾರಣ ಅವರು ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಒಂದೇ ಗಂಟೆಯಲ್ಲಿ 17 ಮಂದಿಗೆ ಕಚ್ಚಿದ ಹುಚ್ಚು ನಾಯಿ