ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

Krishnaveni K
ಸೋಮವಾರ, 11 ಆಗಸ್ಟ್ 2025 (14:28 IST)
ನವದೆಹಲಿ: ಮತಗಳ್ಳತನ ಆರೋಪಿಸಿ ಚುನಾವಣಾ ಆಯೋಗದ ಕಚೇರಿಗೆ ಅನುಮತಿಯಿಲ್ಲದೇ ಮೆರವಣಿಗೆ ಹೊರಟಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದಿಂದ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಜಾಥಾ ಹೊರಟಿದ್ದರು. ಆದರೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ 30 ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ.

‘ಹೇಡಿ ನರೇಂದ್ರ ಮೋದಿ ಸರ್ಕಾರ ಚುನಾವಣಾ ಆಯೋಗದ ಜೊತೆ ಹೊಂದಾಣಿಕೆ ಮಾಡಿಕೊಂಡು ಬದ್ದತೆ ಕಳೆದುಕೊಂಡಿದೆ. ಬೆಂಗಳೂರಿನಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯವರು ದೇಶದ ಗಮನ ಸೆಳೆದ ಮೇಲೆ ಅನ್ಯಾಯ ಸರಿಪಡಿಸುವುದು ಬಿಟ್ಟು ಬಿಜೆಪಿಯವರು ಪೊಲೀಸರನ್ನು ಛೂ ಬಿಟ್ಟು ಪ್ರಶ್ನೆ ಮಾಡುತ್ತಿರುವವರನ್ನು ವಶಕ್ಕೆ ಪಡೆದಿದೆ.

ಇಂದು ಬಿಹಾರ ಚುನಾವಣೆಯಲ್ಲಿ ಮತಪರಿಷ್ಕರಣೆ ವಿರೋಧಿಸಿ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಗಾಂಧಿ ಸೇರಿದಂತೆ ಸಂಸದರು ಜಾಥಾ ಹೊರಟಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು. ಚುನಾವಣಾ ಆಯೋಗ ನಿರ್ಭೀತವಾಗಿ ತನ್ನ ಕೆಲಸ ಮಾಡುವುದು ಬಿಟ್ಟು, ಕೇಂದ್ರ ಸರ್ಕಾರ ವಿಪಕ್ಷಗಳ ಸದ್ದಡಗಿಸುವ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments