ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

Krishnaveni K
ಬುಧವಾರ, 1 ಅಕ್ಟೋಬರ್ 2025 (09:19 IST)
ಬೆಂಗಳೂರು: ಕೇರಳದ ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ಎದೆಗೆ ಗುಂಡಿಕ್ಕಬೇಕು ಎಂದು ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಆರ್ ಎಸ್ಎಸ್ ದುರುಳರಿಂದ ಪ್ರಾಣ ಕಳೆದುಕೊಂಡವರೆಷ್ಟೋ ಎಂದಿದ್ದಾರೆ.

‘ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ‌ ನಿಂತು ತಮ್ಮ ವಿರೋಧಿಗಳ‌ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.

ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ.

ಈ ಹಿಂದೆ ನನಗೆ ಮಾತ್ರವಲ್ಲ ನಾಡಿನ ಅನೇಕ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರಿಗೂ ಕೊಲೆ ಬೆದರಿಕೆ ಒಡ್ಡಿ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರಿ ನಂಬಿದ ಸಿದ್ಧಾಂತಕ್ಕೆ ಬೆನ್ನು ಹಾಕುವ ಜಾಯಮಾನ ನನ್ನದಲ್ಲ. ಒಂದಲ್ಲಾ ಒಂದು ದಿನ ನ್ಯಾಯದ ಎದುರು ಈ ಎಲ್ಲಾ ದುಷ್ಟರು ಮಂಡಿಯೂರುತ್ತಾರೆಂಬ ಭರವಸೆ ನನಗಿದೆ.

ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ರಾಹುಲ್ ಗಾಂಧಿ ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments