Select Your Language

Notifications

webdunia
webdunia
webdunia
webdunia

ಅರವಿಂದ್ ಕೇಜ್ರಿವಾಲ್ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ಸತ್ಯಮೇವ ಜಯತೆ ಎಂದ ಸಿಎಂ ಸಿದ್ದರಾಮಯ್ಯ

ಅರವಿಂದ್ ಕೇಜ್ರಿವಾಲ್ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ಸತ್ಯಮೇವ ಜಯತೆ ಎಂದ ಸಿಎಂ ಸಿದ್ದರಾಮಯ್ಯ

Sampriya

ಬೆಂಗಳೂರು , ಶುಕ್ರವಾರ, 13 ಸೆಪ್ಟಂಬರ್ 2024 (18:44 IST)
ಬೆಂಗಳೂರು:  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. 6 ದಿನಗಳ ಬಳಿಕ ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿ, ಸತ್ಯಮೇವ ಜಯತೆ ಎಂದು ಬರೆದುಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್   ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.

ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ  ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ.

ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು.
ಸತ್ಯಮೇವ ಜಯತೆ..

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಬಿಜೆಪಿ ಆರೋಪ ಸುಳ್ಳು: ಸಿಎಂ ಸಿದ್ದರಾಮಯ್ಯ