Publish Date: Mon, 02 Sep 2024 (20:11 IST)
Updated Date: Mon, 02 Sep 2024 (20:14 IST)
ಬೆಂಗಳೂರು: ಭಾಷಣದ ವೇಳೆ ಆಜಾನ್ ಕೇಳಿಸುತ್ತಿದ್ದ ಹಾಗೇ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನಕ್ಕೆ ಶರಣಾದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಇಂದು ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟಿಸಿದರು.
ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದನ್ನು ಇಂದು ಅಧಿಕೃತವಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು.
ಭಾಷಣದ ವೇಳೆ ಆಜಾನ್ ಆಗುತ್ತಿದ್ದ ಹಾಗೇ ಸಿಎಂ ಮೌನಕ್ಕೆ ಶರಣಾದರು. ಆಜಾನ್ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು.