Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷ ಸ್ಥಾನ: ಕೃಷ್ಣ ಭೈರೆಗೌಡ ಪರ ರಾಹುಲ್ ಗಾಂಧಿ ಬ್ಯಾಟಿಂಗ್

ಕೆಪಿಸಿಸಿ ಅಧ್ಯಕ್ಷ ಸ್ಥಾನ: ಕೃಷ್ಣ ಭೈರೆಗೌಡ ಪರ ರಾಹುಲ್ ಗಾಂಧಿ ಬ್ಯಾಟಿಂಗ್
ಬೆಂಗಳೂರು , ಮಂಗಳವಾರ, 5 ಮೇ 2015 (15:10 IST)
ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಅವಧಿ ಮುಂದಿನ ತಿಂಗಳು ಕೊನೆಗೊಳ್ಳಲಿದ್ದು ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗುತ್ತಾರೆ ಎನ್ನುವ ಕುತೂಹಲ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಳಯದಲ್ಲಿ ಆತಂಕ ಮೂಡಿಸಿದೆ ಎನ್ನಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ಅವಧಿ ಮುಂದಿನ ತಿಂಗಳಿಗೆ ಮುಕ್ತಾಯಗೊಳ್ಳಲಿದೆ. ಆದರೆ, ಮತ್ತೊಂದು ವರ್ಷದ ಅವಧಿಗೆ ಅಧಿಕಾರವಧಿಯನ್ನು ವಿಸ್ತರಿಸಲಾಗುತ್ತಿದೆ ಆದರೆ, ಒಂದು ವೇಳೆ ಪರಮೇಶ್ವರ್ ಅಧಿಕಾರವಧಿಯನ್ನು ವಿಸ್ತರಿಸದಿದ್ದಲ್ಲಿ ಯಾರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎನ್ನುವ ಕುತೂಹಲ ಗರಿಗೆದರಿದೆ.

ಪ್ರಬಲ ಸಮುದಾಯದವರಾದ 42 ವರ್ಷ ವಯಸ್ಸಿನ ಕೃಷ್ಣ ಭೈರೆಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಕುರಿತಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಸಕ್ತಿ ತೋರಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕೃಷ್ಣ ಭೈರೆಗೌಡ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಉತ್ತಮ ಅಭ್ಯರ್ಥಿ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ, ಕೃಷ್ಣ ಭೈರೆಗೌಡ ಪರ ಬ್ಯಾಟಿಂಗ್ ನಡೆಸುತ್ತಿರುವುದು ಸಿದ್ದರಾಮಯ್ಯ ಪಾಳಯಕ್ಕೆ ಬೇಸರ ಮೂಡಿಸಿದೆ. ತಮ್ಮದೇ ಆದ ನಿರ್ಧಾರಗಳನ್ನು ಜಾರಿಗೆ ತರುವಲ್ಲಿ ಹೆಸರುವಾಸಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ನಿರ್ಧಾರಕ್ಕೆ ಬರುತ್ತಾರೆಯೇ ಎನ್ನುವ  ಬಗ್ಗೆ ಕಾಂಗ್ರೆಸ್ ಕಾದುನೋಡುತ್ತಿದೆ.                           

ಕೃಷ್ಣ ಭೈರೆಗೌಡ ಅವರನ್ನು ಹೈಕಮಾಂಡ್ ಈಗಾಗಲೇ ಸಂಪರ್ಕಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ನೀಡಿದಲ್ಲಿ ಮಾತ್ರ ಕೆಪಿಸಿಸಿ ಅಧ್ಟಕ್ಷ ಸ್ಥಾನವನ್ನು ಅಲಂಕರಿಸುವುದಾಗಿ ಸಚಿವ ಕೃಷ್ಣ ಭೈರೆಗೌಡ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada