Publish Date: Sat, 23 Sep 2017 (06:56 IST)
Updated Date: Sat, 23 Sep 2017 (07:01 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಸ್ಥಾನಕ್ಕಲ್ಲ. ತಮ್ಮ ಸಂಸದ ಸ್ಥಾನಕ್ಕೆ.
ಸಿಎಂ ಆಗುವ ಮೊದಲು ಗೋರಖ್ ಪುರ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಆಗಿ ಆಯ್ಕೆಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಆರು ತಿಂಗಳ ಕಾಲಾವಕಾಶ ಇರುತ್ತದೆ.
ಅದರಂತೆ ಸಿಎಂ ಯೋಗಿ ಮತ್ತು ಫುಲ್ಪರ್ ಸಂಸದರಾಗಿದ್ದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಗೋವಾ ಸಿಂಎ ಮನೋಹರ್ ಪರಿಕ್ಕರ್ ಕೂಡಾ ತಮ್ಮ ಸಂಸದ ಸ್ಥಾನಕ್ಕೆ ಇದೇ ರೀತಿ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಈ ಎಲ್ಲಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ