ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ ಹಾಗೂ ಇತರೆ ಇಬ್ಬರು ಅಧಿಕಾರಿಗಳಿಗೆ ದೆಹಲಿ ಕೋರ್ಟ್ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಕಳೆದವಾರ ಗುಪ್ತಾ ಸೇರಿದಂತೆ ಮೂವರು ಅಧಿಕಾರಿಗಳು ಅಪರಾಧಿಗಳೆಂದು ತೀಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ ಡಿಸೆಂಬರ್ 31, 2005ರಿಂದ ನವೆಂಬರ್ 2008ರವರೆಗೆ ಕಲ್ಲಿದ್ದಲು ಇಲಾಖೆ ಕಾರ್ಯದರ್ಶಿಯಾಗಿದ್ದ ಗುಪ್ತಾ, ಅಂದಿನ ಜಂಟಿ ಕಾರ್ಯದರ್ಶಿ ಕೆ.ಎಸ್. ಕ್ರೊಫಾ ಹಾಗೂ ಕಲ್ಲಿದ್ದಲು ಸಚಿವಾಲಯದ ಅಂದಿನ ನಿರ್ದೇಶಕರಾಗಿದ್ದ ಕೆ.ಸಿ. ಸಮರಿಯಾ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರುಪಾಯಿ ದಂಡ ವಿಧಿಸಿದೆ.
ಅಲ್ಲದೆ ಗಣಿ ಕಂಪನಿ ಕೆಎಸ್‌ಎಸ್‌ಪಿಎಲ್ ಗೆ ಒಂದು ಕೋಟಿ ರುಪಾಯಿ ದಂಡ ಹಾಗೂ ಅದರ ವ್ಯವಸ್ಥಾಪಕ ನಿರ್ದೇಶ ಪವನ್ ಕುಮಾರ್ ಅಹ್ಲುವಾಲಿಯಾಗೆ ಮೂರು ವರ್ಷ ಜೈಲು ಮತ್ತು 30 ಲಕ್ಷ ರುಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.