Daily Horoscope
✕

ಕೋಲ್ಡ್ ಸ್ಟೋರೇಜ್ನ ಮೇಲ್ಛಾವಣಿ ಕುಸಿತ : 8 ಮಂದಿ ದುರ್ಮರಣ

Webdunia
ಶುಕ್ರವಾರ, 17 ಮಾರ್ಚ್ 2023 (11:51 IST)
ಲಕ್ನೋ : ಆಲೂಗಡ್ಡೆ ಕೋಲ್ಡ್ ಸ್ಟೋರೇಜ್ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.
 
ಆಲೂಗಡ್ಡೆ ಕೋಲ್ಡ್ ಸ್ಟೋರೇಜ್ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಕಟ್ಟಡ ಕುಸಿತಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರು ಅವರ ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಸಮಾಜವಾದಿ ಚಿಂತನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಸಿದ್ದರಾಮಯ್ಯ

ಒಂದೆರಡು ದಿನಗಳಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

7 ಕಿಮೀ ಮೆಟ್ರೋ ಉದ್ಘಾಟನೆಗೆ ಮೋದಿನೇ ಬರಬೇಕಿತ್ತಾ: ಎಂಬಿ ಪಾಟೀಲ್ ವ್ಯಂಗ್ಯ

ರಾಮನಗರದಲ್ಲಿ ಹೈಡ್ರಾಮಾ: ನಿಖಿಲ್ ಕುಮಾರಸ್ವಾಮಿ ಭೇಟಿಗೂ ಮುನ್ನ ಮಾರಮ್ಮ ದೇಗುಲಕ್ಕೆ ಬೀಗ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್

ಮುಂದಿನ ಸುದ್ದಿ
Show comments