Webdunia - Bharat's app for daily news and videos

Install App

ಗುಜರಾತ್‌ನಲ್ಲಿ ರೋಡ್‌ಶೋನಲ್ಲಿ ಮೋದಿಗೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್‌ ಸೋಫಿಯಾ ಕುಟುಂಬಸ್ಥರು

Sampriya
ಸೋಮವಾರ, 26 ಮೇ 2025 (14:23 IST)
Photo Courtesy X
ವಡೋದರಾ: ಗುಜರಾತ್‌ನ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರೋಡ್ ಶೋ ನಡೆಸಿದರು. ಈ ಕಾರ್ಯಕ್ರಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ  ಅವರ ಕುಟುಂಬಸ್ಥರು ಭಾಗಿಯಾಗಿ, ಪ್ರಧಾನಿಗೆ ಪುಷ್ಪವೃಷ್ಟಿಗೈದರು.

ಜನರು ತಮ್ಮ ನೆಚ್ಚಿನ ನಾಯಕನನ್ನು ನೋಡಲು ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು. ಪ್ರಧಾನಿ ಮೋದಿ ಅವರು ಹತ್ತಿರ ಬರುತ್ತಿದ್ದಾಗ ಸೋಫಿಯಾ ತಾಯಿ ಹಲೀಮಾ ಬೀಬಿ ಸೇರಿದಂತೆ ಕುಟುಂಬ ಸದಸ್ಯರು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು.  

ಆಪರೇಷನ್ ಸಿಂಧೂರ್ ಬಗ್ಗೆ ನಿರಂತರವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುವುದರ ಮೂಲಕ ಗಮನ ಸೆಳೆದಿದ್ದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಅವರ ಕುಟುಂಬ ಸದಸ್ಯರು ಸಹ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಕರ್ನಲ್ ಖುರೇಷಿ, ಅವರ ಪೋಷಕರು, ಸಹೋದರ ಮೊಹಮ್ಮದ್ ಸಂಜಯ್ ಖುರೇಷಿ ಮತ್ತು ಸಹೋದರಿ ಶೈನಾ ಸುನ್ಸಾರಾ ಸೇರಿದಂತೆ ಅವರ ಇಡೀ ಕುಟುಂಬ ತಮ್ಮ ಬೆಂಬಲವನ್ನು ತೋರಿಸಲು ರೋಡ್ ಶೋನಲ್ಲಿ ಭಾಗಿಯಾಗಿತ್ತು.

ಮಾಧ್ಯಮದ ಜೊತೆ ಮಾತನಾಡಿದ ಹಲೀಮಾ ಬೀಬಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದನ್ನು ನೋಡಿ ಸಂತೋಷವಾಯಿತು. ಮಹಿಳೆಯರು ಮತ್ತು ಸಹೋದರಿಯರು ಆಪರೇಷನ್ ಸಿಂಧೂರ ಬಗ್ಗೆ ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದರು.

ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಬಹಳಷ್ಟು ಕೆಲಸ ಮಾಡಿದ್ದಾರೆ. ಸೋಫಿಯಾ ನನ್ನ ಅವಳಿ ಸಹೋದರಿ. ಸಹೋದರಿ ದೇಶಕ್ಕಾಗಿ ಏನಾದರೂ ಮಾಡಿದಾಗ, ಅದು ನನಗೆ ಮಾತ್ರವಲ್ಲದೆ ಇತರರಿಗೂ ಸ್ಫೂರ್ತಿ ನೀಡುತ್ತದೆ. ಆಕೆ ಇನ್ನು ಮುಂದೆ ನನ್ನ ಸಹೋದರಿ ಮಾತ್ರವಲ್ಲ, ದೇಶದ ಸಹೋದರಿ ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಅವಳಿ ಸಹೋದರಿ ಶೈನಾ ಸುನ್ಸಾರಾ ಹೇಳಿದರು.

ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂದೂರ್‌ನ ಯಶಸ್ಸನ್ನು ಶ್ಲಾಘಿಸುವ ಜನರಿಂದ ರಸ್ತೆಗಳ ಉದ್ದಕ್ಕೂ ಭಾರತೀಯ ಸಶಸ್ತ್ರ ಪಡೆಗಳ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಭಾರತ ಇತ್ತೀಚೆಗೆ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ನಂತರ ಪ್ರಧಾನಿ ಮೋದಿ ತಮ್ಮ ತವರು ರಾಜ್ಯಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಮುಂದಿನ ಸುದ್ದಿ
Show comments