ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ ಎಂದು ದೂರಿದರು.
ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಬಹಿರಂಗ. ದಾಖಲೆ ಸಮೇತ ಮತ್ಥೇ ಮಾಧ್ಯಮಗೋಷ್ಠಿ ನಡೆಸಲಾಗುವುದು ಎಂದರು.
ಇಷ್ಟೂ ಗಂಭೀರ ಆರೋಪಗಳನ್ನು ಮಾಡಿದರು ಯಾವುದೇ ಉತ್ತರವನ್ನು ಸಿಗುತ್ತಿಲ್ಲ ಎಂದರು.