ನವದೆಹಲಿ : ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ʼಒಂದು ದೇಶ, ಒಂದು ಚುನಾವಣೆʼ ನಡೆಸಲು ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದ್ದರಿಂದ ಈಗ ಈ ಪ್ರಶ್ನೆ ಎದ್ದಿದೆ.
ಸಮಿತಿಯ ಸದಸ್ಯರ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ.
ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ ಮರು ದಿನ ಕೇಂದ್ರದಿಂದ ಈ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ. ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾರೂ ಇದನ್ನು ಖಚಿತಪಡಿಸಿಲ್ಲ.