Select Your Language

Notifications

webdunia
webdunia
webdunia
webdunia

ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ

ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ
ನವದೆಹಲಿ , ಶುಕ್ರವಾರ, 30 ಡಿಸೆಂಬರ್ 2022 (10:21 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶುಕ್ರವಾರ ಬೆಳಗ್ಗೆ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬೆಳಗ್ಗಿನ ಜಾವ 3.39ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾಳೆ.

ಆರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು 2 ದಿನಗಳ ಹಿಂದೆ ಅಹಮದಾಬಾದ್ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅವರ ನಿಧನದ ಸುದ್ದಿ ಹೊರಹೊಮ್ಮುತ್ತಿದ್ದಂತೆಯೇ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ತಾಯಿಯ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಅವರು ಎಲ್ಲರಿಗೂ ಮಾದರಿ ಎಂದು ಶಾ ಟ್ವೀಟ್ನಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ.

ಹೀರಾಬೆನ್ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದೇಶಕ್ಕೆ ಜನನಾಯಕ ಪ್ರಧಾನಿ ನರೇಂದ್ರ ಮೋದಿಯವರಂತಹ ಮಗನನ್ನು ನೀಡಿ, ಶತಾಯುಷಿಯಾಗಿ ಬದುಕಿ ಬಾಳಿ ದೇವರ ಚರಣ ಸೇರಿದ ಹೀರಾಬೆನ್ ಅವರಿಗೆ ಗೌರವಪೂರ್ವಕ ವಿದಾಯಗಳು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಪ್ರಧಾನಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಗೃಹಸಚಿವ ಅರಗ ಜ್ಞಾನೇಂದ್ರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಮೋದಿ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ವಿಶ್ವದ ಅತ್ಯಂತ ಬಲಿಷ್ಠ ನಾಯಕನಿಗೆ ಜನ್ಮ ನೀಡಿದ ಆ ದಿವ್ಯ ಚೇತನಕ್ಕೆ ದೇವರು ಚಿರ ಶಾಂತಿ ಕರುಣಿಸಲಿ, ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದಿದ್ದಾರೆ.

ಸಂತಾಪ ಸೂಚಿಸಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಹೀರಾಬೆನ್ ಅವರು ಶತಾಯುಷಿಯಾಗಿ ಅವರು ತಮ್ಮ ಪೂರ್ಣ ಜೀವನವನ್ನು ನಡೆಸಿದ್ದಾರೆ. ಆದರೆ ಒಬ್ಬ ತಾಯಿಯಾಗಿ ತನ್ನ ಸುತ್ತಲೂ ಶಾಶ್ವತವಾಗಿ ಶಕ್ತಿ ತುಂಬಲು ಬಯಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ತಮಗಾದ ನಷ್ಟವನ್ನು ಭರಿಸುವ ಶಕ್ತಿ ಕೊಡಲಿ ಎಂದಿದ್ದಾರೆ. 

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಮೋದಿ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಮಗನಿಗೆ ತಾಯಿಯೇ ಇಡೀ ಜಗತ್ತು. ಅವರ ಸಾವು ತುಂಬಲಾಗದ ನಷ್ಟ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ನಿಧನದಿಂದ ನನಗೆ ತುಂಬಾ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯವನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಈ ಬಗ್ಗೆ ಟ್ವೀಟ್ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿಯ ನಿಧನದ ದುಃಖದ ಸುದ್ದಿಯನ್ನು ಸ್ವೀಕರಿಸಿದೆ. ತಾಯಿಯ ಮರಣವು ಜೀವನದ ಅತಿದೊಡ್ಡ ಪೂರೈಸಲಾಗದ ಕೊರತೆಯಾಗಿದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. 

 


Share this Story:

Follow Webdunia kannada

ಮುಂದಿನ ಸುದ್ದಿ

ದಟ್ಟ ಮಂಜು : ಅಪಘಾತಕ್ಕೀಡಾಗಿ ರಾಶಿ ಬಿದ್ದ ನೂರಾರು ವಾಹನ!