Select Your Language

Notifications

webdunia
webdunia
webdunia
webdunia

ಕಾಶ್ಮಿರಿಗಳ ವಿಶ್ವಾಸಗಳಿಸುವಲ್ಲಿ ಮೋದಿ ಸರ್ಕಾರ ವಿಫಲ: ಕಾಂಗ್ರೆಸ್

ಕಾಶ್ಮಿರ
ನವದೆಹಲಿ , ಮಂಗಳವಾರ, 19 ಜುಲೈ 2016 (13:16 IST)
ಕಾಶ್ಮಿರ ಹಿಂಸಾಚಾರ ಘಟನೆಗಳು ಮುಂಗಾರು ಅಧಿವೇಶನದಲ್ಲಿ ಕೋಲಾಹಲವೆಬ್ಬಿಸಿವೆ. ಕೇಂದ್ರ ಸರಕಾರ ಕಾಶ್ಮಿರಿಗಳ ವಿಶ್ವಾಸಗಳಿಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
 
ಕೇಂದ್ರ ಸರಕಾರ ಸಾಮಾನ್ಯ ನಾಗರಿಕರನ್ನು ಕೂಡಾ ಭಯೋತ್ಪಾದಕರಂತೆ ಬಿಂಬಿಸುತ್ತಿದೆ. ಸಾಮಾನ್ಯ ಜನರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಗುಲಾಮ್ ನಬಿ ಆಜಾದ್ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಕಾಶ್ಮಿರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನದ ಪರೋಕ್ಷವಾಗಿ ಪ್ರಚೋದನೆ ನೀಡುತ್ತಿದೆ. ದೇಶ ಮತ್ತು ಪ್ರತ್ಯೇಕತಾವಾದಿಗಳ ನಡುವ ಸಂಘರ್ಷ ಏರ್ಪಟ್ಟಿದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ.
 
ಕಾಶ್ಮಿರದ ಜನತೆ ಭಾರತದೊಂದಿಗಿದ್ದರೂ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಪರೋಕ್ಷ ಬೆಂಬಲದಿಂದ ದೇಶದಲ್ಲಿ ಹಿಂಸಾಚಾರ ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಅಮಿತ್ ಶಾ, ಕಾಂಗ್ರೆಸ್‌ ಪಕ್ಷಕ್ಕೆ ಗುಲಾಮ್ ನಬಿ ಆಜಾದ್: ಶೀಲಾ ದೀಕ್ಷೀತ್