Select Your Language

Notifications

webdunia
webdunia
webdunia
webdunia

ಬಿಜೆಪಿಯನ್ನು ಗೆಲ್ಲಿಸಿದ ರಾಹುಲ್‌ ಗಾಂಧಿಗೆ ಅಭಿನಂದನೆ: ಕೆ.ಟಿ ರಾಮ್ ರಾವ್

Current state president of BRS KT Ram Rao, Delhi Assembly Election, Congress Leader Rahul Gandhi

Sampriya

ಹೈದರಾಬಾದ್ , ಶನಿವಾರ, 8 ಫೆಬ್ರವರಿ 2025 (17:20 IST)
Photo Courtesy X
ಹೈದರಾಬಾದ್: ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿದ್ದಕ್ಕಾಗಿ ರಾಹುಲ್ ಗಾಂಧಿಯವರಿಗೆ  ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಆರ್‌ಎಸ್‌ನ ಹಾಲಿ ರಾಜ್ಯಾಧ್ಯಕ್ಷ ಕೆ.ಟಿ ರಾಮ್ ರಾವ್  ವ್ಯಂಗ್ಯ ಮಾಡಿದ್ದಾರೆ.

ದೆಹಲಿ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ‌‌‌‌‌‌‌‌‌‌‌‌ದೆಹಲಿ ಚುನಾವಣಾ ಫಲಿತಾಂಶದ ಮೂಲಕ ಬಿಜೆಪಿಯನ್ನು ಸೋಲಿಸುವಲ್ಲಿ ರಾಹುಲ್ ಗಾಂಧಿಯವರು ಅಸಮರ್ಥರು ಎಂದು ತೋರಿಸಿಕೊಟ್ಟಿದ್ದಾರೆ.  ಅವರು ಸ್ವಂತ ಬಲದಿಂದಲೂ ಸಹ ಗೆಲ್ಲಲು ಸಾಧ್ಯವಿಲ್ಲ. ಅಲ್ಲದೆ ಇತರೇ ಸ್ಥಳೀಯ ಪಕ್ಷಗಳನ್ನು ದುರ್ಬಲಗೊಳಿಸಿ, ಪರೋಕ್ಷವಾಗಿ ಬಿಜೆಪಿಯ ಗೆಲುವಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯನ್ನು ಗೆಲ್ಲಿಸಿದಂತಹ ರಾಹುಲ್ ಗಾಂಧಿಯವರಿಗೆ ನಾನು ಅಭಿನಂದನೆ ಸಲ್ಲಿಸಲು ಇಚ್ಛಿಸುತ್ತೇನೆ. ಈ ಸಾಧನೆಯ ಬಗ್ಗೆ ಅವರಿಗೆ ಬಹಳ ಹೆಮ್ಮೆ ಇದೆ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಅರಳಿದ ಬಿಜೆಪಿ: ರಾಜ್ಯ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ