Select Your Language

Notifications

webdunia
webdunia
webdunia
webdunia

ಮೂರು ರಾಜ್ಯಗಳಲ್ಲಿ ಸೋತ ಬೆನ್ನಲ್ಲೇ ‘ಇಂಡಿಯಾ’ ಮೀಟಿಂಗ್ ಕರೆದ ಕಾಂಗ್ರೆಸ್

mallikarjuna kharge
ನವದೆಹಲಿ , ಭಾನುವಾರ, 3 ಡಿಸೆಂಬರ್ 2023 (16:41 IST)
ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಮಿತ್ರ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಸಭೆ ಕರೆದಿದೆ.

ಪಂಚ ರಾಜ್ಯ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಪೈಕಿ ಕಾಂಗ್ರೆಸ್ ತೆಲಂಗಾಣದಲ್ಲಿ ಮಾತ್ರ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಉಳಿದ ಮೂರೂ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.

ಈ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿತವಾಗಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಒಗ್ಗಟ್ಟಾಗಿರುವ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ಗೆ ಈ ಫಲಿತಾಂಶ ಎಚ್ಚರಿಕೆಯ ಕರೆ ಗಂಟೆಯಾಗಿದೆ.

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಡಿಸೆಂಬರ್ 6 ರಂದು ಇಂಡಿಯಾ ಒಕ್ಕೂಟದ ಪಕ್ಷಗಳನ್ನು ಸಭೆ ನಡೆಸಲು ಆಹ್ವಾನಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಿತ್ರ ಪಕ್ಷಗಳಿಗೆ ಕರೆ ಮಾಡಿ ಸಭೆ ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

telagana Assembly Election Result 2023 Live: ತೇಲಂಗಣ ವಿಧಾನಸಭೆ ಚುನಾವಣೆ ಫಲಿತಾಂಶ 2023 ಲೈವ್