Publish Date: Tue, 16 Jan 2018 (20:18 IST)
Updated Date: Tue, 16 Jan 2018 (20:20 IST)
ಕಾಂಗ್ರೆಸ್ ಪಕ್ಷ ಹಾಗೂ ಬರ ಅವಳಿ ಸಹೋದರರಿದ್ದಂತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್‌ನ್ನು ಲೇವಡಿ ಮಾಡಿದ್ದಾರೆ.
ರಾಜಸ್ತಾನದ ಬಾರ್ಮರ್‌ನಲ್ಲಿ ತೈಲ ಸಂಸ್ಕರಣಾಗಾರ ಉದ್ಘಾಟನೆ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಹೋದಲ್ಲೆಲ್ಲಾ ಬರ ಇದ್ದೇ ಇರುತ್ತದೆ ಎಂದು ಟೀಕಿಸಿದ್ದಾರೆ.
ಕೇವಲ ಚಪ್ಪಾಳೆಗಾಗಿ ಕೆಲವರು ಈಡೇರಿಸಲಾಗದ ಭರವಸೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದರು. ರಾಜಸ್ತಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಬರ ನಿರ್ವಹಣೆ ಮಾಡಿರುವ ರೀತಿ ಶ್ಲಾಘನೀಯ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.