Select Your Language

Notifications

webdunia
webdunia
webdunia
webdunia

ಲೋಕಸಭೆ ಚುನಾವಣೆ: ಮೊದಲ ಪಟ್ಟಿಯಲ್ಲಿ ರಾಹುಲ್, ಸೋನಿಯಾ ಗಾಂಧಿ

ಲೋಕಸಭೆ ಚುನಾವಣೆ: ಮೊದಲ ಪಟ್ಟಿಯಲ್ಲಿ ರಾಹುಲ್, ಸೋನಿಯಾ ಗಾಂಧಿ
ನವದೆಹಲಿ , ಶುಕ್ರವಾರ, 8 ಮಾರ್ಚ್ 2019 (09:47 IST)
ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕ್ಷೇತ್ರಗಳ ಹೆಸರು ಬಹಿರಂಗಪಡಿಸಿದೆ. ಆದರೆ ಮೊದಲ ಪಟ್ಟಿಯಲ್ಲಿ ಪ್ರಿಯಾಂಕಾ ವಾದ್ರಾ ಹೆಸರಿಲ್ಲ.


ರಾಹುಲ್ ಮತ್ತು ಸೋನಿಯಾ ಗಾಂಧಿ ಹಿಂದಿನಂತೆಯೇ ಉತ್ತರ ಪ್ರದೇಶವನ್ನೇ ಸ್ಪರ್ಧೆಗೆ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೊದಲಿನಂತೆಯೇ ರಾಹುಲ್ ಅಮೇಥಿಯಿಂದ ಸ್ಪರ್ಧಿಸಲಿದ್ದರೆ, ಸೋನಿಯಾ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ.

ಇದರ ಹೊರತಾಗಿ ಗುಜರಾತ್ ನ ಬಿಜೆಪಿ ಪ್ರಾಬಲ್ಯದ ವಡೋದರ, ಆನಂದ್ ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಆದರೆ ಇತ್ತೀಚೆಗಷ್ಟೇ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿರುವ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಹೆಸರು ಮೊದಲ ಪಟ್ಟಿಯಲ್ಲಿಲ್ಲ. ಹೀಗಾಗಿ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆಯೇ ಅಥವಾ ಪಕ್ಷದ ಸಂಘಟನೆ ಜವಾಬ್ಧಾರಿ ಮಾತ್ರ ಹೊತ್ತುಕೊಳ್ಳಲಿದ್ದಾರೆಯೇ ಎಂಬುದು ಖಚಿತವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಗೌಡ್ತಿ ಬಿರುದು ಸುಮಲತಾ ಅಂಬರೀಶ್ ಗೆ ಕೊಟ್ಟಿದ್ಯಾರು?