ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ 'ರೋಹಿತ್ ಶರ್ಮಾ ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ! ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ' ಎಂದು ಬರೆದುಕೊಂಡಿದ್ದರು.
ಶಮಾ ಅವರ ಈ ಹೇಳಿಕೆ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.
ಕಾಂಗ್ರೆಸ್ ವಕ್ತಾರ ಶಮಾ ಮೊಹಮ್ಮದ್ ಅವರು ರೋಹಿತ್ ಶರ್ಮಾ ಅವರನ್ನು ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ! ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದರು. ಬಿಜೆಪಿಯು ಕಾಂಗ್ರೆಸ್ ಅನ್ನು ಟೀಕಿಸಿತು ಮತ್ತು ಪಕ್ಷವು ವಿಶ್ವಕಪ್ ವಿಜೇತರನ್ನು "ಬಾಡಿ ಶೇಮ್" ಮಾಡಿದೆ ಎಂದು ಆರೋಪಿಸಿದೆ.
ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್‌ಗೆ ಕಾಂಗ್ರೆಸ್ ಛೀಮಾರಿ ಹಾಕಿದೆ. ಅಲ್ಲದೆ ಪೋಸ್ಟ್ ಅಳಿಸಿ ಹಾಕುವಂತೆಯೂ ನಿರ್ದೇಶಿಸಿದೆ. ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಎಚ್ಚರಿಕೆ ನೀಡಿದೆ.
ಡಾ. ಶಮಾ ಮೊಹಮ್ಮದ್ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಅವರಿಗೆ ಸೂಚಿಸಲಾಗಿದೆ. ಭವಿಷ್ಯದಲ್ಲಿ ಭಾರಿ ಎಚ್ಚರಿಕೆ ಪಾಲಿಸಬೇಕು ಎಂದು ತಿಳಿಸಲಾಗಿ ಎಂದು ಕಾಂಗ್ರೆಸ್‌ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ತಿಳಿಸಿದ್ದಾರೆ.
ಶಮಾ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿರುವಾಗಲೇ ಟಿಎಂಸಿ ಕಾಂಗ್ರೆಸ್ ಬೆಂಬಲಕ್ಕೆ ಬಂದಿದ್ದು, ಕಾಂಗ್ರೆಸ್ ನಾಯಕರ ಮಾತು ಸರಿ, ಕ್ರಿಕೆಟಿಗ ಟೀಂ ಇಂಡಿಯಾದಲ್ಲಿ ಇರುವುದಕ್ಕೂ ಲಾಯಕ್ಕಿಲ್ಲ ಎಂದು ಮತ್ತೊಂದು ವಿವಾದ ಸೃಷ್ಟಿಸಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುರಿತು ಶಾಮಾ ಮೊಹಮ್ಮದ್ ಅವರ ಕಾಮೆಂಟ್‌ಗಳ ಕುರಿತು, ಟಿಎಂಸಿ ಸಂಸದ ಸೌಗತ ರಾಯ್ ಅವರು ಪ್ರತಿಕ್ರಿಯಿಸಿ, "... ಕಾಂಗ್ರೆಸ್ ನಾಯಕಿ ಹೇಳಿದ್ದು ಸರಿ. ರೋಹಿತ್ ಶರ್ಮಾ ತಂಡದಲ್ಲಿ ಇರಲು ಅರ್ಹರಲ್ಲ ಎಂದು ಹೇಳಿದ್ದಾರೆ.
ಭಾನುವಾರ ಚಾಂಪಿಯನ್ಸ್ ಟ್ರೋಫಿಗಾಗಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 17 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದ ನಂತರ ಮೊಹಮ್ಮದ್ ಟೀಕೆಗಳನ್ನು ಅನುಸರಿಸಿದರು.