Webdunia - Bharat's app for daily news and videos

Install App

ಕಾಂಗ್ರೆಸ್ನ ಗ್ಯಾರಂಟಿಗಳು ದೇಶವನ್ನು ದಿವಾಳಿಗೆ ತಳ್ಳಬಹುದು : ನರೇಂದ್ರ ಮೋದಿ

Webdunia
ಗುರುವಾರ, 1 ಜೂನ್ 2023 (10:45 IST)
ಜೈಪುರ : ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಹೆಣೆದಿದೆ. ಕಾಂಗ್ರೆಸ್ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
 
ಬುಧವಾರ ರಾಜಸ್ಥಾನದ ಅಜ್ಮೀರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ರಾಜ್ಯ ಚುನಾವಣೆಗಳಿಗಾಗಿ ಗ್ಯಾರಂಟಿ ಸೂತ್ರಗಳನ್ನು ಸೃಷ್ಟಿಸಿದೆ. ಆದರೆ ಅವರು ತಾವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಾರಾ? ಕಲ್ಯಾಣಕ್ಕಾಗಿ ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ ಎಂದು ಜನರು ಆಶ್ಚರ್ಯಪಡುತ್ತಿದ್ದಾರೆ. ಆದರೆ ಅವರಿಗೆ ಎಂದಿಗೂ ಹಣದ ಸಮಸ್ಯೆಯೇ ಆಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

50 ವರ್ಷಗಳ ಹಿಂದೆ ಕಾಂಗ್ರೆಸ್ ದೇಶದಲ್ಲಿ ಬಡತನ ತೊಡೆದುಹಾಕುತ್ತದೆ ಎಂದು ಭರವಸೆ ನೀಡಿತ್ತು. ಆದರೆ ಇದು ಅವರು ಬಡವರಿಗೆ ಬಗೆದಿರುವ ದೊಡ್ಡ ದ್ರೋಹವಾಗಿದೆ. ಬಡವರ ದಾರಿ ತಪ್ಪಿಸುವುದು ಮತ್ತು ಅವರನ್ನು ವಂಚಿತರನ್ನಾಗಿ ಮಾಡುವುದು ಕಾಂಗ್ರೆಸ್ನ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಕೂಡಾ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಏನು ಸಿಕ್ಕಿದೆ? ಶಾಸಕರು, ಸಿಎಂ ಹಾಗೂ ಮಂತ್ರಿಗಳು ತಮ್ಮ ತಮ್ಮಲ್ಲೇ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments