Publish Date: Thu, 17 Aug 2017 (12:39 IST)
Updated Date: Thu, 17 Aug 2017 (12:41 IST)
ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಗಣೇಶ ಹಬ್ಬಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಲಿದೆ ಎಂಬ ವರದಿಗಳು ಕೇಳಿಬರುತ್ತಿವೆ.
ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೈಕಮಾಂಡ್ ಬಳಿ ಸಚಿವ ಸಂಪುಟ ವಿಸ್ತರಣೆ ಅಂತಿಮ ಅನುಮತಿ ಪಡೆದಿದ್ದಾರೆ. ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಉಳಿದಿರುವ 3 ಸಚಿವ ಸ್ಥಾನ ತುಂಬುವ ಕೆಲಸದಲ್ಲಿ ಸಿಎಂ ತೊಡಗಿದ್ದಾರೆ. ಆಗಸ್ಟ್ 21ರಂದು ರಾಜಭವನದಲ್ಲಿ ಮೂವರು ನೂತನ ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ ಸಂಪುಟದಲ್ಲಿ ಯಾರಿಗೆ ಸಿಗಲಿದೆ ಅವಕಾಶ ಎಂಬ ಲೆಕ್ಕಾಚಾರ ಶುರುವಾಗಿದೆ. ಸಿಎಂ ಆಪ್ತರಾದ ಎಚ್.ಎಂ. ರೇವಣ್ಣ, ಷಡಕ್ಷರಿ, ಶಿವಳ್ಳಿ, ನರೇಂದ್ರಸ್ವಾಮಿ ಹೆಸರುಗಳು ಕೇಳಿಬರುತ್ತಿವೆ. ಸಂಜೆ ವೇಳೆಗೆ ಸಂಪುಟಕ್ಕೆ ಸೇರುವ ನೂತನ ಸಚಿವರು ಯಾರು ಎಂಬ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ