Publish Date: Sun, 09 Oct 2022 (13:41 IST)
Updated Date: Sun, 09 Oct 2022 (13:45 IST)
ಜೈಪುರ : ರಾಜಸ್ಥಾನದ ಜೈಪುರದ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ(77) ಅವರು ಭಾನುವಾರ ನಿಧನರಾಗಿದ್ದಾರೆ.
ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭನ್ವರ್ ಲಾಲ್ ಶರ್ಮಾ ಅವರನ್ನು ಶನಿವಾರ ಎಸ್ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇದೀಗ ಪಾರ್ಥಿವ ಶರೀರವನ್ನು ಹನುಮಂತನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು, ವಿದ್ಯಾಧರ್ ನಗರದ ಬ್ರಾಹ್ಮಣ ಮಹಾಸಭಾ ಕಟ್ಟಡದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಸೋಮವಾರ ಮಧ್ಯಾಹ್ನ ಸರ್ದರ್ಶಹರ್ನಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.