Publish Date: Mon, 11 Jul 2022 (06:52 IST)
Updated Date: Mon, 11 Jul 2022 (06:53 IST)
ಪಣಜಿ : ಶಾಸಕ ದಿಗಂಬರ್ ಕಾಮತ್ ಅವರ ನೇತೃತ್ವದಲ್ಲಿ ಗೋವಾದ ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಅಂಚಿನಲ್ಲಿದ್ದು, ಕನಿಷ್ಠ 6 ರಿಂದ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಕಾಂಗ್ರೆಸ್ ಶಾಸಕ ಮೈಕಲ್ ಲೋಬೋ, ತಾನು ಬಿಜೆಪಿ ಸೇರುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯು ಕಾಂಗ್ರೆಸ್ ಶಾಸಕರಲ್ಲಿ ಗೊಂದಲ ಸೃಷ್ಟಿಸಿ ವದಂತಿ ಹಬ್ಬಿಸುತ್ತಿದೆ. ನಾನು ನನ್ನ ಮನೆಯಲ್ಲಿ ಕುಳಿತಿದ್ದೇನೆ. ಈ ಮಾತುಕತೆಗಳಲ್ಲಿ ಯಾವುದೇ ಸತ್ಯವಿಲ್ಲ. ವದಂತಿಗಳನ್ನು ಯಾರು ಹಬ್ಬಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಆದರೆ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಸದ್ಯ ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಸಭೆ ಕರೆಯಲಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಕಾಂಗ್ರೆಸ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
Ramya kosira
Publish Date: Mon, 11 Jul 2022 (06:52 IST)
Updated Date: Mon, 11 Jul 2022 (06:53 IST)