Webdunia - Bharat's app for daily news and videos

Install App

ಕತ್ತೆಯನ್ನು ಕುದುರೆ ಎಂದು ಕರೆಯಲಾರೆ: ರಾಹುಲ್ ವಿರುದ್ಧ ಹೇಳಿಕೆ ನೀಡಿದ ಶಾಸಕ ಉಚ್ಚಾಟನೆ

Webdunia
ಬುಧವಾರ, 19 ಅಕ್ಟೋಬರ್ 2016 (14:06 IST)
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಂಡಾಯ ಕಾಂಗ್ರೆಸ್ ಶಾಸಕ ಆರ್‌.ಕೆ.ರೈ ರನ್ನು ಪಕ್ಷದಿಂದ ಉಚ್ಚಾಟಿಸಿ ಚತ್ತೀಸ್‌ಗಢ್ ರಾಜ್ಯ ಕಾಂಗ್ರೆಸ್ ಘಟಕ ಆದೇಶ ಹೊರಡಿಸಿದೆ. 
 
ಚತ್ತೀಸ್‌ಗಢ್ ಜನತಾ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಜೋಗಿ ಬೆಂಬಲಿಗರಾದ ರೈ, ಪಕ್ಷದ ನಿರ್ಧಾರವನ್ನು ಸ್ವಾಗತಿಸಿದ್ದು, ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 
ಕಳೆದ ಕೆಲ ದಿನಗಳ ಹಿಂದೆ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿ ಕತ್ತೆಯನ್ನು ಕುದುರೆ ಎಂದು ಕರೆಯಲಾರೆ. ಒಂದು ವೇಳೆ ನನ್ನ ಹೇಳಿಕೆ ತಪ್ಪಾಗಿದ್ದಲ್ಲಿ ಹೈಕಮಾಂಡ್ ಕುರುಡಾಗಿದೆ. ಇಲ್ಲವೇ ಕುರುಡನಂತೆ ನಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದರೂ ನಿರಾಶೆಯಾಗಿಲ್ಲ. ನಾನು ನಿಜವಾಜ ಬುಡಕಟ್ಟು ಸಮುದಾಯದ ಪ್ರತಿನಿಧಿ. ಇದೀಗ ನಾನು ಸ್ವಾತಂತ್ರ್ಯವಾಗಿದ್ದೇನೆ. ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಬುಡಕಟ್ಟು ಸಮುದಾಯದ ವಿರೋಧಿ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.
 
ಚತ್ತೀಸ್‌ಗಡ್ ರಾಜ್ಯ ಕಾಂಗ್ರೆಸ್ ಸಮಿತಿಯು ಶಾಸಕ ರೈಯವರನ್ನು ಪಕ್ಷದಿಂದ ಉಚ್ಚಾಟಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments