Webdunia - Bharat's app for daily news and videos

Install App

ಮೋದಿ ಸರಕಾರದ ಎರಡು ವರ್ಷದ ದುರಾಡಳಿತ: ಕಾಂಗ್ರೆಸ್‌ನಿಂದ ಕಿರುಚಿತ್ರ, ಪುಸ್ತಕ ಬಿಡುಗಡೆ

Webdunia
ಗುರುವಾರ, 26 ಮೇ 2016 (11:58 IST)
ಪ್ರಧಾನಿ ನರೇಂದ್ರ ಮೋದಿ ಸರಕಾರದ ಎರಡು ವರ್ಷದ ದುರಾಡಳಿತದ ಮೇಲೆ ಬೆಳಕು ಚೆಲ್ಲಲು ಮಾಧ್ಯಮ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಅಭಿವೃದ್ಧಿ ನಿಂತು ಹೋಗಿದೆ ದೇಶದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ಎನ್ನುವ ಶೀರ್ಷಿಕೆಯಡಿ ಮಾಧ್ಯಮ ಸಂವಾದ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಕಳೆದ ಲೋಕಸಭೆ ಚುನಾವಣೆಗೆ ಮುಂಚೆ ಮೋದಿ ನೀಡಿದ ಭರವಸೆಗಳು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರಕಾರ ವೈಫಲ್ಯಗಳ ಬಗ್ಗೆ ಪುಸ್ತಕವೊಂದನ್ನು ಹೊರತರಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ದೇಶದ 30 ನಗರಗಳು ಮತ್ತು ಪಟ್ಟಣಗಳಲ್ಲಿ ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸಲಿದ್ದಾರೆ ಎನ್ನಲಾಗಿದೆ.
 
ಕೇಂದ್ರ ಸರಕಾರದ ಎರಡು ವರ್ಷದ ಸಂಭ್ರಮಾಚರಣೆಗೆ ತಿರುಗೇಟು ನೀಡಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮತ್ತು ಗುಲಾಮ್ ನಬಿ ಆಜಾದ್ ಸುದ್ದಿಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.  

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments