Webdunia - Bharat's app for daily news and videos

Install App

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ: ವೈಷ್ಣವ್‌ ಟೀಕೆ

Sampriya
ಭಾನುವಾರ, 29 ಡಿಸೆಂಬರ್ 2024 (10:27 IST)
Photo Courtesy X
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್‌ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಆರೋಪಿಸಿದ್ದಾರೆ.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಕಾಂಗ್ರೆಸ್‌ ಅವರನ್ನು ಕಡೆಗಣಿಸಿತ್ತು. ಸಿಂಗ್‌ ಅವರ ಅಂತಿಮಯಾತ್ರೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್‌ನ ಬೂಟಾಟಿಕೆಯು ಬಹಿರಂಗವಾಗಿದೆ ಎಂದು ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಆರ್ಥಿಕ ಸುಧಾರಣೆಗಳ ಶಿಲ್ಪಿ, ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್‌ ಅವರಿಗೆ ಸ್ಮಾರಕ ನಿರ್ಮಾಣ ಮಾಡಲು ಕಾಂಗ್ರೆಸ್‌ ನಿರಾಕರಿಸಿತ್ತು. ಅಲ್ಲದೆ, ಎಐಸಿಸಿ ಪ್ರಧಾನ ಕಚೇರಿಯ ಮೂಲಕ ರಾವ್‌ ಅವರ ಅಂತಿಮಯಾತ್ರೆ ನಡೆಸುವುದನ್ನು ನಿರಾಕರಿಸಿತ್ತು. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ನಿಧನರಾದ ಬಳಿಕ ಅವರನ್ನು ಗೌರವಿಸುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ ಎಂದು ವೈಷ್ಣವ್ ಟೀಕಿಸಿದ್ದಾರೆ.

ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಿಗಮ್‌ಬೋಧ್‌ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅವರಿಗೆ ತೀವ್ರ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದರು. ಅದಕ್ಕೆ ಅಶ್ವಿನಿ ವೈಷ್ಣವ್‌ ಸೇರಿದಂತೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments