Publish Date: Thu, 04 May 2017 (07:15 IST)
Updated Date: Thu, 04 May 2017 (07:18 IST)
ನವದೆಹಲಿ: ಸದಾ ಪ್ರಧಾನಿ ಮೋದಿಯೆಂದರೆ ಕಿಡಿಕಾರುವ ಕಾಂಗ್ರೆಸ್ ಇದೀಗ ಈ ವಿಷಯಕ್ಕೆ ಪ್ರಧಾನಿ ಜತೆ ರಾಜಿಗೆ ನೀಡಲು ಸಿದ್ಧ ಎಂದಿದ್ದಾರೆ.
ಅದು ರಾಷ್ಟ್ರಪತಿ ಚುನಾವಣೆಗೆ. ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಇತರ ಪಕ್ಷಗಳ ಜತೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಾತುಕತೆಯಲ್ಲಿ ತೊಡಗಿದೆ. ಪ್ರಮುಖ ವಿಪಕ್ಷ ನಾಯಕರು ಕಾಂಗ್ರೆಸ್ ಜತೆ ಸಂಪರ್ಕದಲ್ಲಿದೆ.
ಹೀಗಾಗಿ ಬಿಜೆಪಿ ಇನ್ನೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ರಾಷ್ಟ್ರಪತಿ ಹುದ್ದೆಗೆ ಪೈಪೋಟಿ ನಡೆಯಲಿದೆ. ಒಂದು ವೇಳೆ ಪ್ರಧಾನಿ ಮೋದಿ ಎಲ್ಲರೂ ಒಪ್ಪುವಂತಹ ಅಭ್ಯರ್ಥಿಯನ್ನು ಸೂಚಿಸಿದರೆ ಆ ವ್ಯಕ್ತಿಯನ್ನು ಒಪ್ಪಿಕೊಳ್ಳಲು ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಗೆ ದೇಶ ಒಪ್ಪುವಂತಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅವರನ್ನು ಒಪ್ಪಲು ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ