Select Your Language

Notifications

webdunia
webdunia
webdunia
webdunia

ಮೂರು ಕಡೆ ಗೆದ್ದ ಕಾಂಗ್ರೆಸ್, ಬಿಜೆಪಿಗೆ ಮುಖಭಂಗ

ಮೂರು ಕಡೆ ಗೆದ್ದ ಕಾಂಗ್ರೆಸ್, ಬಿಜೆಪಿಗೆ ಮುಖಭಂಗ
ನವದೆಹಲಿ , ಶುಕ್ರವಾರ, 3 ಮಾರ್ಚ್ 2023 (10:43 IST)
ನವದೆಹಲಿ : ದೇಶದ ನಾಲ್ಕು ರಾಜ್ಯಗಳ ಐದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳ ಫಲಿತಾಂಶ ಹೊರಬಿದ್ದಿದೆ. ಮಹಾರಾಷ್ಟ್ರದ ಕಸ್ಬಾ ಉಪಚುನಾವಣೆಯಲ್ಲಿ ಅಘಾಡಿ ಕೂಟದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದು, ಶಿಂಧೇ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತೀವ್ರ ಮುಖಭಂಗ ಅನುಭವಿಸಿದೆ.
 
ಕಳೆದ 25 ವರ್ಷಗಳಿಂದ ಈ ಕ್ಷೇತ್ರ ಬಿಜೆಪಿ ವಶದಲ್ಲಿಯೇ ಇತ್ತು. ಚಿಂದ್ವಾಡವನ್ನು ಮಾತ್ರ ಬಿಜೆಪಿ ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ. ಪಶ್ಚಿಮ ಬಂಗಾಳದ ಸಾಗರ್ದಿಘೀ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.

ಟಿಎಂಸಿ-ಬಿಜೆಪಿ ಕಾದಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ 22,980 ಮತಗಳ ಅಂತರದಿಂದ ಪ್ರಚಂಡ ಗೆಲುವು ಕಂಡಿದ್ದಾರೆ. ಈ ಕ್ಷೇತ್ರದಲ್ಲಿ 1972ರಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ ಗೆದ್ದಿತ್ತು. 2021ರ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿತ್ತು ಎಂಬುದು ಗಮನಾರ್ಹ. 


Share this Story:

Follow Webdunia kannada

ಮುಂದಿನ ಸುದ್ದಿ

ಬಡ್ತಿ ಪಡೆಯಲು ಬಾಸ್ ಜೊತೆ ಮಲಗಲು ಪತ್ನಿಯನ್ನು ಒತ್ತಾಯಿಸಿದ ಪತಿ!