Webdunia - Bharat's app for daily news and videos

Install App

ಗೋವಾ: 40 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದ ದಿಗ್ವಿಜಯ್ ಸಿಂಗ್

Webdunia
ಗುರುವಾರ, 18 ಫೆಬ್ರವರಿ 2016 (16:12 IST)
ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲಿದೆ. ಪ್ರಸ್ತುತ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆಯ ಪ್ರಸ್ತಾವನೆಯಿಲ್ಲ ಎಂದು ನಗರಕ್ಕೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ಗೋವಾ ವಿಧಾನಸಭೆ ಟಿಕೆಟ್ ಹಂಚಿಕೆ ಮಾಡುವ ಸಂದರ್ಭದಲ್ಲಿ ಆಯ್ಕೆ ಸಮಿತಿಯ ಅಭಿಪ್ರಾಯಗಳನ್ನು ಪಡೆದ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
 
ಚುನಾವಣೆ ಭರವಸೆಗಳನ್ನು ಈಡೇರಿಸದ ಅಧಿಕಾರರೂಢ ಬಿಜೆಪಿ ಸರಕಾರದ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕ್ಯಾಸಿನೋಗಳನ್ನು ಮುಚ್ಚಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಕ್ಯಾಸಿನೋಗಳ ಮಾಲೀಕರೊಂದಿಗೆ ಕೈ ಜೋಡಿಸಿದೆ. ರಾಜ್ಯದಲ್ಲಿ ಗಣಿಗಾರಿಕೆ ಆರಂಭವಾಗಿಲ್ಲ.ಬೊಕ್ಕಸದ ಆದಾಯ ಕಡಿಮೆಯಾಗಿದ್ದು ಭ್ರಷ್ಟಾಚಾರ ಮತ್ತು ಪಕ್ಷಪಾತ ಹೆಚ್ಚಾಗಿದೆ ಎಂದು ಆರೋಪಿಸಿದರು.
 
ಗೋವಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲೂಯಿಝಿನೋ ಫಾಲೈರೋ ಅವರನ್ನು ಬದಲಾಯಿಸುವ ಸಾಧ್ಯತೆಗಳಿವೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಲು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ನಿರಾಕರಿಸಿದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments