Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ಅಶೋಕ್ ಗೆಹ್ಲೋಟ್

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ಅಶೋಕ್ ಗೆಹ್ಲೋಟ್
ನವದೆಹಲಿ , ಶುಕ್ರವಾರ, 30 ಸೆಪ್ಟಂಬರ್ 2022 (09:01 IST)
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾದ ನಂತರ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ.

ನಾನು ಕೊಚ್ಚಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ (ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ) ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೇನೆ. ಅವರು ಒಪ್ಪಿಕೊಳ್ಳದಿದ್ದಾಗ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ. ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದರಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಎರಡು ದಿನಗಳ ಹಿಂದೆ ರಾಜಸ್ಥಾನದಲ್ಲಿ ನಡೆದ ಘಟನೆ ನಮ್ಮನ್ನು ಬೆಚ್ಚಿ ಬೀಳಿಸಿತ್ತು. ನಾನು ಸಿಎಂ ಆಗಬೇಕು ಎಂದುಕೊಂಡೇ ಇದೆಲ್ಲಾ ನಡೆದಿದೆ. ಘಟನೆ ಬಗ್ಗೆ ಸೋನಿಯಾ ಅವರಲ್ಲಿ ಕ್ಷಮೆಯಾಚಿಸಿದ್ದೇನೆ ಎಂದು ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಮೊದಲ ಸ್ಥಾನ ಪಡೆದುಕೊಂಡ ಬೆಂಗಳೂರು ವಿಮಾನ ನಿಲ್ದಾಣ