Select Your Language

Notifications

webdunia
webdunia
webdunia
webdunia

27 ವರ್ಷಗಳ ನಂತರ ಉ.ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ರಚನೆ: ದೀಕ್ಷಿತ್

27 ವರ್ಷಗಳ ನಂತರ ಉ.ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ರಚನೆ: ದೀಕ್ಷಿತ್
ಕಾನ್ಪುರ್ , ಮಂಗಳವಾರ, 26 ಜುಲೈ 2016 (20:23 IST)
ಉತ್ತರಪ್ರದೇಶದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ 27 ವರ್ಷಗಳ ನಂತರ ಸರಕಾರ ರಚಿಸಲಿದೆ. ಬಿಜೆಪಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಲಿದೆ ಎಂದು ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಶೀಲಾ ದೀಕ್ಷಿತ್ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರದ ಅಂಗವಾಗಿ ನಗರಕ್ಕೆ ಆಗಮಿಸಿದ ದೀಕ್ಷಿತ್, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಸರಕಾರಗಳ ಅವಧಿಯಲ್ಲಿ ರಾಜ್ಯ ತುಂಬಾ ಹಿಂದುಳಿದಿದೆ. ಜನತೆಗೆ ಅಭಿವೃದ್ಧಿ ಬೇಕಾದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿ ಎಂದರು.
 
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಿಜೆಪಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದಂತೆ, ಉತ್ತರಪ್ರದೇಶದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದೆ ಎಂದರು. 
 
ಉತ್ತರಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜ್ ಬಬ್ಬರ್ ಮಾತನಾಡಿ, ಸಿಎಂ ಅಭ್ಯರ್ಥಿ ಶೀಲಾ ದೀಕ್ಷಿತ್ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಿದ್ದಾರೆ. ಎಸ್‌ಪಿ, ಬಿಎಸ್‌ಪಿ ಮತ್ತು ಬಿಜೆಪಿ ಪಕ್ಷಗಳು ರಾಜ್ಯವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: 11 ತಿಂಗಳ ಗರಿಷ್ಠ ಕುಸಿತ ಕಂಡ ಸಂವೇದಿ ಸೂಚ್ಯಂಕ