Webdunia - Bharat's app for daily news and videos

Install App

ಕೆಂಪುಕೋಟೆಗೆ ಕಂಟೇನರ್ ಕೋಟೆಯ ಭದ್ರತೆ!

Webdunia
ಸೋಮವಾರ, 9 ಆಗಸ್ಟ್ 2021 (08:11 IST)
ನವದೆಹಲಿ(ಆ.09): ಗಣರಾಜ್ಯೋತ್ಸವದ ವೇಳೆ ರೈತರು ಟ್ರಾಕ್ಟರ್ ರಾರಯಲಿ ನಡೆಸಿ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಿರುವ ದೆಹಲಿ ಪೊಲೀಸರು ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಪ್ರವೇಶ ದ್ವಾರದ ಬಳಿ ಹಡಗಿನ ಬೃಹತ್ ಕಂಟೇನರ್ಗಳನ್ನು ಗೋಡೆಗಳಂತೆ ಪೊಲೀಸರು ನಿಲ್ಲಿಸಿದ್ದಾರೆ. ಜೊತೆಗೆ ಕಂಟೇನರ್ಗಳನ್ನು ಅಲಂಕರಿಸಿ, ಬಣ್ಣಗಳನ್ನು ಬಳಿಯಲಾಗಿದೆ. ಜಮ್ಮು- ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ದಾಳಿಯ ಕಾರಣದಿಂದಾಗಿಯೂ ರಾಷ್ಟ್ರ ರಾಜಧಾನಿ ಬಿಗಿ ಬಂದೋಬಸ್್ತ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಜ.26ರಂದು ನೂರಾರು ಟ್ರಾಕ್ಟರ್ಗಳಲ್ಲಿ ಆಗಮಿಸಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದರು. ಇದರಿಂದ ಆಸ್ತಿ- ಪಾಸ್ತಿಗೆ ಹಾನಿ ಸಂಭವಿಸಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments