Publish Date: Tue, 13 Apr 2021 (06:55 IST)
Updated Date: Tue, 13 Apr 2021 (06:57 IST)
ಲಕ್ನೋ : ಕಾನ್ ಸ್ಟೇಬಲ್ ಮತ್ತು ಆತನ ಸ್ನೇಹಿತ ಸೇರಿ ಮಹಿಳೆಯೊಬ್ಬಳ ಮೇಲೆ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.
ಕಾನ್ ಸ್ಟೇಬಲ್ ಕೆಲಸಕ್ಕೆ ಹಾಜರಾಗದೆ ಪೋಲಿ ಅಲೆಯುತ್ತಿದ್ದ ಎನ್ನಲಾಗಿದೆ. ಆದರೆ ಔಷಧಿ ಖರೀದಿಸಲು ಆಸ್ಪತ್ರೆಗೆ ತೆರಳುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡುವ ನೆಪದಲ್ಲಿ ಕಾನ್ ಸ್ಟೇಬಲ್ ತನ್ನ ಸ್ನೇಹಿತನ ಜೊತೆ ಸೇರಿ ಕಾರು ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾನಭಂಗ ಎಸಗಿದ್ದಾರೆ. ಬಳಿಕ ಆಕೆಗೆ ಈ ವಿಚಾರ ಯಾರಿಗೂ ತಿಳಿಸದಂತೆ ತೀವ್ರ ಬೆದರಿಕೆ ಹಾಕಿದ್ದಾರಂತೆ.
ಆದರೆ ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.