Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಹಿನ್ನಲೆ; ಸಿಬಿಎಸ್ ಇ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ

ಕೊರೊನಾ ಭೀತಿ ಹಿನ್ನಲೆ; ಸಿಬಿಎಸ್ ಇ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ
ನವದೆಹಲಿ , ಗುರುವಾರ, 19 ಮಾರ್ಚ್ 2020 (09:58 IST)
ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸಿಬಿಎಸ್ ಇ ಮತ್ತು ಜೆಇಇ ಮುಖ್ಯ ಪರೀಕ್ಷೆಗಳನ್ನು ಕೇಂದ್ರ ಸರ್ಕಾರವು ಮುಂದೂಡಿದೆ.

ವೇಳಾಪಟ್ಟಿಯ ಪ್ರಕಾರ ಇಂದು ಸಿಬಿಎಸ್ ಇ ಮತ್ತು ಜೆಇಇ ಮುಖ್ಯ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ಸೋಂಕು ದೇಶವ್ಯಾಪಿ ಹರಡುತ್ತಿರುವ ಹಿನ್ನಲೆಯಲ್ಲಿ ಸಿಬಿಎಸ್ ಇ ಮತ್ತು ಜೆಇಇ ಮುಖ್ಯ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಗೆ ಮತ್ತೆ ದಿನಾಂಕ ನಿಗದಿ ಮಾಡುವುದಾಗಿ ಸಿಬಿಎಸ್ ಇ ಬೋರ್ಡ್ ಕಾರ್ಯದರ್ಶಿ ತಿಳಿಸಿದ್ದಾರೆ.

 

ಆದರೆ ಐಸಿಎಸ್ ಇ ಪರೀಕ್ಷೆಗಳು ಮುಂದುವರಿಯಲಿದ್ದು, ಈಗಾಗಲೇ ನಿಗದಿಪಡಿಸಿದ ವೇಳಾಪಟ್ಟಿಯಂತೆ ನಡೆಯಲಿದೆ ಎಂದು  ಐಸಿಎಸ್ ಇ ಬೋರ್ಡ್ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬೈಜೂಸ್ ನಲ್ಲಿ ಉದ್ಯೋಗಾವಕಾಶ