Select Your Language

Notifications

webdunia
webdunia
webdunia
webdunia

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಿಬ್ಬಂದಿಗೆ ಕೊರೊನಾ ಸೋಂಕು

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಿಬ್ಬಂದಿಗೆ ಕೊರೊನಾ ಸೋಂಕು
ನವದೆಹಲಿ , ಬುಧವಾರ, 12 ಜನವರಿ 2022 (08:49 IST)
ಕೊರೊನಾ ಈಗ ಅತ್ಯಂತ ವೇಗವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಸಾಲುಸಾಲಾಗಿ ವೈದ್ಯರಲ್ಲಿ ಕಾಣಿಸಿಕೊಳ್ಳುತ್ತಿದೆ.

ಕಾಲೇಜು, ಶಿಕ್ಷಣಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರಿಗೆ ತಗುಲಿದೆ. ಅದೆಷ್ಟೋ ರಾಜಕಾರಣಿಗಳು ಕೊರೊನಾಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಗೇ, ನ್ಯಾಯಾಲಯಗಳಲ್ಲಿ ಜಡ್ಜ್ಗಳು, ವಕೀಲರಲ್ಲಿ ಕೂಡ ಕೊವಿಡ್ ಕಾಣಿಸಿಕೊಂಡಿದೆ. ಎಲ್ಲ ಕಡೆಗಳಲ್ಲೂ 100-150ರ ಸಂಖ್ಯೆಯ ಲೆಕ್ಕದಲ್ಲೇ ಕಾಣಿಸಿಕೊಳ್ಳುತ್ತಿದೆ. ಹಾಗೇ, ಇದೀಗ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನಕಚೇರಿ 42 ಸಿಬ್ಬಂದಿಯಲ್ಲಿ ಕೊರೊನಾ ದೃಢಪಟ್ಟಿದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿತ್ತು. ಅದರ ಹಿನ್ನೆಲೆಯಲ್ಲಿ ಕೊವಿಡ್ 19 ತಪಾಸಣೆ ನಡೆಸಿದಾಗ ಅನೇಕರಲ್ಲಿ ಸೋಂಕು ದೃಢಪಟ್ಟಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರಲ್ಲೂ ಕೊರೊನಾ ದೃಢಪಟ್ಟಿದ್ದು, ಸದ್ಯ ಮನೆಯಲ್ಲೇ ಐಸೋಲೇಟ್ ಆಗಿ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಸಂಸದ ವರುಣ್ ಗಾಂಧಿ, ಖುಷ್ಬು ಸುಂದರ್, ಮನೋಜ್ ತಿವಾರಿ ಸೇರಿ ಹಲವರಿಗೆ ಸೋಂಕು ತಗುಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಗಳ ಜೊತೆ ಮೋದಿ ಸಭೆ