Publish Date: Mon, 21 Jun 2021 (09:44 IST)
Updated Date: Mon, 21 Jun 2021 (09:47 IST)
ನವದೆಹಲಿ: ಕೊರೋನಾ ಎರಡನೇ ಅಲೆ ಮುಗಿಯಿತು, ಇನ್ನೇನು ಎಲ್ಲಾ ಕಡೆ ಅನ್ ಲಾಕ್ ಆಗುತ್ತಿದೆ ಎಂದು ಖುಷಿಯಾಗಿರುವಾಗಲೇ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.
ಇನ್ನು, 6-8 ವಾರಗಳಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗಬಹುದು ಎಂದು ಮುನ್ಸೂಚನೆ ನೀಡಿದೆ. ಇದು ಮತ್ತೆ ಜನರಲ್ಲಿ ಆತಂಕ ಮೂಡಿಸಿದೆ.
ಈಗಾಗಲೇ ಮಹಾರಾಷ್ಟ್ರದಲ್ಲಿ ಮೂರನೇ ಅಲೆ ಆರಂಭವಾಗಿದೆ. ಹೀಗಾಗಿ ಕರ್ನಾಟಕಕ್ಕೂ ಅಪಾಯ ಕಾದಿದೆ. ಕಳೆದ ಬಾರಿಯೂ ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚಾದ ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲೂ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಿತ್ತು. ಹೀಗಾಗಿ ರಾಜ್ಯದಲ್ಲಿ ಈಗ ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದಿರುವುದು ಅನಿವಾರ್ಯವಾಗಿದೆ.