Publish Date: Thu, 02 Jun 2022 (13:46 IST)
Updated Date: Thu, 02 Jun 2022 (13:42 IST)
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.
ಈ ಕುರಿತಂತೆ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಕಳೆದ ವಾರ ಸೋನಿಯಾ ಗಾಂಧಿ ಅವರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದರು.
ಆದರೆ ಬುಧವಾರ ಸಂಜೆ ಜ್ವರ ಬಂದ ಹಿನ್ನೆಲೆ ಕೋವಿಡ್-19 ಪರೀಕ್ಷೆ ನಡೆಸಿದಾಗ ಅವರಿಗೆ ಪಾಸಿಟಿವ್ ಬಂದಿದೆ.