Select Your Language

Notifications

webdunia
webdunia
webdunia
webdunia

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ
ನವದೆಹಲಿ , ಬುಧವಾರ, 24 ಮಾರ್ಚ್ 2021 (09:39 IST)
ನವದೆಹಲಿ: ದೇಶದಾದ್ಯಂತ ಇದುವರೆಗೆ 60 ವರ್ಷ ಮೇಲ್ಪಟ್ಟ ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಮಾತ್ರ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ಇನ್ನು, 45 ವರ್ಷ ಮೇಲ್ಪಟ್ಟ ಎಲ್ಲಾ ಆರೋಗ್ಯವಂತರೂ ಕೊರೋನಾ ಲಸಿಕೆ ಪಡೆಯಬಹುದಾಗಿದೆ.


ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಸಿಕೆ ವ್ಯರ್ಥವಾಗುತ್ತಿರುವ ಮತ್ತು ಕೊರೋನಾ ಸೋಂಕು ಹೆಚ್ಚುತ್ತಿರುವ ವರದಿಗಳ ಬೆನ್ನಲ್ಲಿ ಕೇಂದ್ರ ಸಚಿವ ಸಂಪುಟ ಇಂತಹದ್ದೊಂದು ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು.

ಇನ್ನೊಂದೆಡೆ ವಿದ್ಯಾರ್ಥಿಗಳಿಗೂ ಲಸಿಕೆ ನೀಡಿ ಎಂಬ ಆಗ್ರಹ ಕೇಳಿಬಂದಿದೆ. ಕಾಲೇಜುಗಳು ಈಗಾಗಲೇ ಆರಂಭವಾಗಿವೆ. ಆದರೆ ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕೊರೋನಾ ಅಪಾಯ ಹೊತ್ತು ತರುತ್ತಿದ್ದಾರೆ. ಹೀಗಾಗಿ ಅವರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಿ ಎಂದು ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದು ಹಿಂಸೆ ನೀಡುತ್ತಿದ್ದ ತಂದೆಗೆ ಇಂತಹ ಗತಿ ತಂದ ಮಗಳು