Webdunia - Bharat's app for daily news and videos

Install App

ದೇಶದಲ್ಲಿ 26,041 ಮಂದಿಗೆ ಕೊರೊನಾ ಸೋಂಕು; 276 ಬಲಿ

Webdunia
ಸೋಮವಾರ, 27 ಸೆಪ್ಟಂಬರ್ 2021 (13:34 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 26,041 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 276 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,36,78,786ಕ್ಕೆ ತಲುಪಿದ್ದು, 4,47,194ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿಯಲ್ಲಿ ತಿಳಿಸಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,99,620ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 29,621 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,29,31,972 ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 11,65,006 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 56,44,08,251 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 86,01,59,011 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments