Publish Date: Mon, 25 May 2020 (10:00 IST)
Updated Date: Mon, 25 May 2020 (10:02 IST)
ನವದೆಹಲಿ : ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,38,845ಕ್ಕೇರಿಕೆಯಾಗಿದೆ.
ಭಾರತದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 4,021 ಜನರು ಬಲಿಯಾಗಿದ್ದಾರೆ. 57,721 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 77,103 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.