ಆತಿಶಿ ಗದ್ದುಗೆ ಏರಲು ಕ್ಷಣಗಣನೆ: ದೆಹಲಿಯ ಮೂರನೇ ಮಹಿಳಾ ಸಿಎಂ ಆಗಿ ಪ್ರಮಾಣವಚನ

Sampriya
ಶನಿವಾರ, 21 ಸೆಪ್ಟಂಬರ್ 2024 (14:03 IST)
Photo Courtesy X
ನವದೆಹಲಿ: ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆಯಿಂದ ತೆರವಾದ  ದೆಹಲಿಯ ನೂತನ ಮುಖ್ಯಮಂತ್ರಿ ಸ್ಥಾನದ ಗದ್ದುಗೆಗೆ ಆತಿಶಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಜೆ 4.30ಕ್ಕೆ ರಾಜ್ ನಿವಾಸದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತಿಶಿ ದೆಹಲಿಯ 3ನೇ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ವಿಶೇಷ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್ ಹಾಗೂ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ದೆಹಲಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಮುಖ್ಯಮಂತ್ರಿ ಗದ್ದುಗೆ ಏರಿದ ದೇಶದ 17ನೇ ಮಹಿಳೆ ಎಂಬ ಹೆಗ್ಗಳಿಕೆಗೆ ಆತಿಶಿ ಪಾತ್ರರಾಗಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇತರ ಐವರು ಎಎಪಿ ನಾಯಕರು ಅವರ ಸಂಪುಟದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ಸುಲ್ತಾನಪುರ ಮಜ್ರಾ ಶಾಸಕ ಮುಕೇಶ್‌ ಅಹ್ಲಾವತ್‌, ಗೋಪಾಲ್‌ ರಾಯ್‌, ಕೈಲಾಶ್‌ ಗೆಹ್ಲೋತ್‌, ಸೌರಭ್‌ ಭಾರದ್ವಾಜ್‌ ಮತ್ತು ಇಮ್ರಾನ್‌ ಹುಸ್ಸೇನ್‌  ಸೇರಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು, ಸೆಪ್ಟೆಂಬರ್ 13ರಂದು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದರು. ಬಳಿಕ ಅಚ್ಚರಿ ಎನ್ನುವಂತೆ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿ ರಾಜೀನಾಮೆ ನೀಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments