Select Your Language

Notifications

webdunia
webdunia
webdunia
webdunia

ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ: ಶಬರಿಮಲೆ ಕ್ಷೇತ್ರಕ್ಕೆ ಹರಿದುಬಂದ ಭಕ್ತಸಾಗರ

Sabarimala

Sampriya

ತಿರುವಂತನಪುರಂ , ಮಂಗಳವಾರ, 14 ಜನವರಿ 2025 (15:56 IST)
Photo Courtesy X
ತಿರುವಂತನಪುರಂ: ಕೇರಳದ ಶಬರಿಮಲೈನಲ್ಲಿ ನಡೆಯಲಿರುವ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಧಾವಿಸಿದ್ದಾರೆ.

ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಕೇರಳದ ಶಬರಿಮಲೈನಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ.

ಅಯ್ಯಪ್ಪ ಸ್ವಾಮಿಯನ್ನು ಪೂಜಿಸಲು ಅಪಾರ ಸಂಖ್ಯೆಯ ಭಕ್ತರು ಶಬರಿಮಲೆಗೆ ಆಗಮಿಸುತ್ತಿದ್ದಾರೆ. ಮಕರವಿಳಕ್ಕು ಉತ್ಸವದ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮಕರವಿಳಕ್ಕು ಉತ್ಸವಕ್ಕೂ ಮುನ್ನ ಅಯ್ಯಪ್ಪನ ದರ್ಶನ ಪಡೆಯಲು ಹಾಗೂ ಮಕರವಿಳಕ್ಕು ಉತ್ಸವದಲ್ಲಿ ಪಾಲ್ಗೊಳ್ಳಲು ಅಪಾರ ಸಂಖ್ಯೆಯ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಆಗಮಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೇವಸ್ಥಾನದಲ್ಲಿ ಭದ್ರತೆಗೆ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಮಕರ ವಿಳಕ್ಕು ಉತ್ಸವದ ಭದ್ರತೆ ಮತ್ತು ಸುಗಮ ನಿರ್ವಹಣೆಗಾಗಿ ಒಟ್ಟು 5,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾತ್ರಿಕರನ್ನು ನಿರ್ವಹಿಸಲು ಮತ್ತು ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾವು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಅವರೇ ಕಾರಣ: ಪ್ರಿಯಾಂಕ್‌ ಖರ್ಗೆ ವಿರುದ್ಧ ಇದೇನು ಹೊಸ ಆರೋಪ