Publish Date: Tue, 22 Sep 2020 (10:12 IST)
Updated Date: Tue, 22 Sep 2020 (10:14 IST)
ನವದೆಹಲಿ: ಮಗನಿಗೆ ಮದುವೆಯಾಗಿ 9 ವರ್ಷ ಕಳೆದರೂ ಮಕ್ಕಳಾಗಲಿಲ್ಲವೆಂಬ ಕೊರಗಿನಲ್ಲಿ ಹಿರಿಯ ದಂಪತಿ ವಿಷಪ್ರಾಷನ ಮಾಡಿ ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಮಗನಿಗೆ ಮಕ್ಕಳಾಗಲಿಲ್ಲವೆಂಬ ಕೊರಗಿನಿಂದ ಇಬ್ಬರೂ ಖಿನ್ನರಾಗಿದ್ದರು ಎನ್ನಲಾಗಿದೆ. ಮಕ್ಕಳ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಗನ ಜತೆ ಕಿತ್ತಾಟವಾಡಿದ್ದರು. ಬಳಿಕ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.